ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ.
ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ.
ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಕಾಲು ಜಾರಿ ಬಿದ್ದಿದ್ದಾನೆ. ನಂತರ ಆತನನ್ನು ರಕ್ಷಣೆ ಮಾಡಲು ಹೋಗಿ ಮತ್ತೋರ್ವ ಸಾವಿನ ಹಾದಿ ಹಿಡಿದಿದ್ದಾನೆ.
ಇನ್ನು, ಮಳೆಯ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಇಬ್ಬರ ಶವಗಳು, ಕೆಲವು ಗಂಟೆಗಳ ಬಳಿಕ ಪತ್ತೆಯಾಗಿವೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದೆ.