ಮುಂಡಗೋಡ: ಚಿಕ್ಕೋಡಿಯಲ್ಲಿ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡ ತಾಲೂಕಿನ ಜೈನ ಸಮಾಜದ ಬಾಂಧವರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು.
ಪಟ್ಟಣದ ಶಿರಸಿ ರಸ್ತೆಯಲ್ಲಿರೋ ಜಿನಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ಉಗ್ರವಾಗಿ ಖಂಡಿಸಿದ್ರು. ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ರು. ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕು, ಅಲ್ಲದೇ ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಅಂತಾ ಮನವಿಯಲ್ಲಿ ಆಗ್ರಹಿಸಿದ್ರು.
ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳ ಜೈನ ಸಮಾಜದ ಮುಖಂಡರು, ಮಹಿಳೆಯರು ಭಾಗಿಯಾಗಿದ್ರು.