ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ‌. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್
ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!