ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.