ಶಿಗ್ಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಶಿಗ್ಗಾವಿ ತಾಲೂಕಿನ ಜೈನ ಸಮಾಜದ ಬಾಂಧವರು, ಮಠಾಧೀಶರು ಹಾಗೂ ವಿವಿಧ ಸಮಾಜದ ಮುಖಂಡರು ಶಿಗ್ಗಾವಿಯಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದ್ರು.
ಪಟ್ಟಣದ ಮಹಾವೀರ ವೃತ್ತದಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ, ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಾಗಿ ಬಂದಿತು, ನಂತರ ವಿರಕ್ತಮಠದ ಶ್ರೀ ಸಂಗನಬಸವ ಶ್ರೀಗಳು ಜೂನ ಮುನಿಶ್ರೀಯವರ ಭೀಕರ ಹತ್ಯೆಯನ್ನು ಖಂಡಿಸಿ ಮಾತನಾಡಿದ್ರು. ಸಮಾಜದಲ್ಲಿ ಶ್ರೀಗಳಿಗೆ, ಮಠಾಧೀಶರಿಗೆ ಸೂಕ್ತ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ರು. ಅಲ್ಲದೇ, ಮುನೀಶ್ರೀ ಹತ್ತೆ ಘಟನೆಯನ್ನು ಉಗ್ರವಾಗಿ ಖಂಡಿಸಿದ್ರು.
ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕು, ಅಲ್ಲದೇ ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಅಂತಾ ಮನವಿಯಲ್ಲಿ ಆಗ್ರಹಿಸಿದ್ರು.
ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳ ಜೈನರು ಸೇರಿದಂತೆ ವಿವಿಧ ಸಮಾಜದ ಮುಖಂಡರು, ಮಹಿಳೆಯರು ಭಾಗಿಯಾಗಿದ್ರು.