ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಶಂಕರ್ ಗೌಡಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ತಾಲೂಕಿನಲ್ಲಿ 3 ಶಾಲೆಗಳಿಗೆ ರಜೆ ಘೋಷಿಣೆ ಮಾಡಲಾಗಿದ್ದು, ಹೀಗೆ ಘೋಷಣೆ ಮಾಡಿರುವ ರಜೆಯ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಶಾಲೆ ನಡೆಸಿ, ಹೊಂದಿಸಿಕೊಳ್ಳಲಾಗುವುದು ಎಂದು ಬಿಇಒ ತಿಳಿಸಿದ್ದಾರೆ.