ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ.

ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ ಮೃತಪಟ್ಟು ಬಿದ್ದಿರೋದು ಕಂಡು ಬಂದಿದೆ.

ಕರಡಿ ದಾಳಿಯಿಂದ ಮೃತಪಟ್ಟ ಘಟನೆ ಅರಿವಾದ ತಕ್ಷಣವೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರೋ ಕುಟುಂಬಸ್ಥರು, ಗ್ರಾಮಸ್ಥರು, ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

error: Content is protected !!