ಹಾವೇರಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೆಯ್ ಕುಂಟೆಯವರನ್ನ ಲೋಕಾ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ, ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿದ್ದರು. ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು.
ಅದಕ್ಕಾಗಿ ಡಿಡಿಪಿಐ 7 ಸಾವಿರ ರು. ಲಂಚ ಕೇಳಿದ್ದರು ಎನ್ನಲಾಗಿದೆ. ಹೀಗಾಗಿ, 7 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುತ್ತಿದೆ.