ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ.

ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.

error: Content is protected !!