ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ ಹಾಗೂ ಕೆಲವು ಕಡೆ ಹಾನಿಯಾದ ಹಿನ್ನಲೆಯಲ್ಲಿ, ನಾಳೆ ಮೊದಲ ಬಾರಿಗೆ ಏಲಕ್ಕಿ ನಾಡಿಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಕೃಷಿ,ಆರೋಗ್ಯ,ಆಹಾರ, ಮಳೆ-ಬೆಳೆ ಹಾನಿ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಹೀಗಾಗಿ, ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ರಿಂದ ಪೂರ್ವ ಭಾವಿ ಸಭೆ ನಡೆಯಿತು.
ತವರು ಜಿಲ್ಲೆಯವರಾಗಿದ್ದರು ಬಸವರಾಜ್ ಬೊಮ್ಮಾಯಿ ಈ ಹಿಂದೆ ಸಿಎಂ ಆಗಿದ್ದಾಗ ಒಂದು ಬಾರಿಯೂ ಪ್ರಗತಿ ಪರಿಶೀಲನಾ ಸಭೆ ಮಾಡಿರಲಿಲ್ಲ. ಹೀಗಾಗಿ, ಸಿದ್ದರಾಮಯ್ಯ ನವರ ಹಾವೇರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಮಹತ್ವ ಪಡೆದಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಿನ ಹಲವು ಲೋಪದೋಷಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.