ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!

ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಮುಂಡಗೋಡಿನಲ್ಲಿ..!
ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು.

ಪೊಲೀಸ್ ಠಾಣೆಯಲ್ಲಿ..!
ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ 77ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ಯೂನಿಫಾರ್ಮ್ ತೊಟ್ಟ ಪೊಲೀಸ್ ಅಧಿಕಾರಿಗಳು, ಪೊಲೀಸ್ ಪೇದೆಗಳು ಶಿಸ್ತಿನಿಂದ ಧ್ವಜಾರೋಹಣದಲ್ಲಿ ಪಾಲ್ಗೊಂಡರು. ನೂತನ ಸಿಪಿಐ ಬರಮಪ್ಪ ಲೋಕಾಪುರ್ ಧ್ಜಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ್ರು.

ಹುನಗುಂದದಲ್ಲಿ..!
ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಆವರಣದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಷರೀಫಸಿಂಗ್ ಶಿಗ್ಗಟ್ಟಿ ಧ್ವಜಾರೋಹಣ ನೆರವೇರಿಸಿದ್ರು. ಈ ವೇಳೆ ಗ್ರಾಮದ ಶಾಲಾ ವಿದ್ಯಾರ್ಥಿಗಳು ಒಂದೆಡೆ ಸೇರಿ ಸಂಭ್ರಮಿಸಿದ್ರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮದ ಪ್ರಮುಖರು ಭಾಗಿಯಾಗಿದ್ರು.

ಇಂದೂರಿನಲ್ಲಿ..!
ಇನ್ನು, ಇಂದೂರು ಗ್ರಾಮದಲ್ಲೂ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು. ಇಲ್ಲಿನ ಗ್ರಾಮ ಪಂಚಾಯತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಪಂ ನೂತನ ಅಧ್ಯಕ್ಷ ಶಶಿಧರ್ ಪರವಾಪುರ್ ಧ್ವಜಾರೋಹಣ ನೆರವೇರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸೇರಿ ಸದಸ್ಯರು, ಗ್ರಾಮದ ಪ್ರಮುಖರು, ವಿದ್ಯಾರ್ಥಿಗಳು ಹಾಜರಿದ್ದರು.

ನಂದಿಕಟ್ಟಾದಲ್ಲಿ..!
ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ಆವರಣದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಸಂತೋಷ ಭೋಸಲೇ ಧ್ವಜಾರೋಹಣ ನೆರವೇರಿಸಿದ್ರು. ಈ ವೇಳೆ ಗ್ರಾಮದ ಶಾಲಾ ವಿದ್ಯಾರ್ಥಿಗಳು ಒಂದೆಡೆ ಸೇರಿ ಸಂಭ್ರಮಿಸಿದ್ರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮದ ಪ್ರಮುಖರು ಭಾಗಿಯಾಗಿದ್ರು.

*************

error: Content is protected !!