ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ.

ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!