ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಯಲ್ಲವ್ವ ರಾಮಣ್ಣ ಇಟ್ಲಾಪುರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆ ಉಸಿರೆಳೆದಿದ್ದಾರೆ.
ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಯಲ್ಲವ್ವ ಇಟ್ಲಾಪುರ, ಕಳೆದ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಧ್ಯಕ್ಷ ಪದವಿಯಿಂದ ಕೆಳಗೆ ಇಳಿದಿದ್ರು. ಬಹುತೇಕ ಸದಸ್ಯರ ಪೈಕಿ ಹಿರಿಯರಾಗಿದ್ದ ಯಲ್ಲವ್ವ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದರು.
ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಯಲ್ಲವ್ವ ಇಟ್ಲಾಪುರ ನಿಧನಕ್ಕೆ ಗ್ರಾಮದ ಹಲವು ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.