ಚಿಗಳ್ಳಿಯಲ್ಲಿ ನೇಣಿಗೆ ಶರಣಾದ ವ್ಯಕ್ತಿ, ಕಲ್ಲಪ್ಪಜ್ಜನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಹೊರ ವಲಯದಲ್ಲಿರೋ ಕಲ್ಲಪ್ಪಜ್ಜಯ್ಯನ ಗುಡ್ಡದ ದೇವಸ್ಥಾನದ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ.

ಚಿಗಳ್ಳಿಯ ಈರಪ್ಪ ಫಕ್ಕೀರಪ್ಪ ಲಕ್ಕಿಕೊಪ್ಪ (45) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ, ಯಾವುದೋ ಕಾರಣಕ್ಕೆ ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!