ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆಯಾಗಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇನ್ನು ನಡುಬೀದಿಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು. ಇನ್ನು ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.