ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮಿಗಳ ಸಾನಿದ್ಯದಲ್ಲಿ ಹಾಗೂ ಶ್ರೀ ನಿಜಗುಣಾನಂದ ಸ್ವಾಮಿಗಳ ಸಮ್ಮುಖದಲ್ಲಿ ಜರುಗಲಿದೆ ಅಂತಾ ಮಾತೆ ಬಸವೇಶ್ವರಿ ಮಾಹಿತಿ ನೀಡಿದ್ರು.
ಶರಣರ ವಚನ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಸಹಕಾರಿಯಾಗಲಿದೆ. ಹೀಗಾಗಿ, ಶರಣರ ವಚನ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.