ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು.
ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.