ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ.

ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

error: Content is protected !!