ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ‌ ಮಗನಿಗೆ ಗಂಭೀರ ಗಾಯವಾಗಿದೆ.

ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ.

ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ ಧಾವಿಸಿ ರೋಗಿಗಳಿಗೆ ಪ್ರಥಮ ಚಿಕಿತ್ಸೆ ಕೊಟ್ಟು
ತಾಲ್ಲೂಕು ಆಸ್ಪತ್ರೆ ಮುಂಡಗೋಡಿಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!