ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಕ್ರಾಸ್ ಬಳಿ ಮೊಬೈಲ್ ಅಂಗಡಿ ಕಳ್ಳತನವಾಗಿದೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಮೊಬೈಲ್ ಅಂಗಡಿ ಮೇಲಿನ ಸೀಟ್ ಕೊರೆದು ಕಳ್ಳರು ಒಳ ನುಗ್ಗಿದ್ದು ಬೆಲೆಬಾಳುವ ಮೊಬೈಲ್ ಗಳನ್ನು ಎಗರಿಸಿಕೊಂಡು ಹೋಗಿದ್ದಾರೆ‌.

ಸುರೇಶ್ ಶೇಟ್ ಎಂಬುವವರಿಗೆ ಸೇರಿದ ಮೊಬೈಲ್ ಶಾಪ್ ನಲ್ಲಿ ಹತ್ತಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಏನಿಲ್ಲವೆಂದರೂ ಈ ಮೊಬೈಲ್ ಗಳ‌ ಮೌಲ್ಯ ಒಂದು ಲಕ್ಷ ರೂ. ಗೂ ಹೆಚ್ಚು ಅಂತಾ ಅಂಗಡಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಇನ್ನು ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!