ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ.

ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ ಪ್ರಕಾಶ್ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳು ಮುಂಡಗೋಡ ತಾಲೂಕಿನ ಚಿಗಳ್ಳಿ, ಹೊಸಕೊಪ್ಪ ಗ್ರಾಮದವನು ಅಂತಾ ಹೇಳಲಾಗುತ್ತಿದ್ದು, ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!