ಬಾಚಣಕಿ ವಿದ್ಯಾರ್ಥಿನಿ ಜನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ..! ಗ್ರಾಮಸ್ಥರ ಹರ್ಷ

ಮುಂಡಗೋಡ ತಾಲೂಕಿನ ಬಾಚಣಕಿಯ ಗ್ರಾಮೀಣ ಪ್ರತಿಭೆಯೊಂದು ಸಾಧನೆ ಮಾಡಿದೆ. ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡದು ಮುಂಡಗೋಡ ತಾಲೂಕಿಗೆ ಕೀರ್ತಿ ತಂದಿದ್ದಾಳೆ‌.

ಅಂದಹಾಗೆ ಬಾಚಣಕಿ ಗ್ರಾಮದ ಅನುಪಮ ನಾಗಪ್ಪ ಕೊಂಡಿಕೊಪ್ಪ ಎಂಬುವವಳೆ ಸಾಧನೆಗೈದ ವಿದ್ಯಾರ್ಥಿನಿ. ಸದ್ಯ ಮುಂಡಗೋಡ ಲೊಯೊಲಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿನಿ ತಾಲೂಕಾ ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ಸದ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು.

ಇಂದು ಬೆಂಗಳೂರಿನ ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಹೀಗಾಗಿ ಬಾಚಣಕಿ ಗ್ರಾಮದ ಹಲವು ಮುಖಂಡರು, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಸೇರಿದಂತೆ ಹಲವರು ವಿದ್ಯಾರ್ಥಿನಿಗೆ ಅಭಿನಂದಿಸಿದ್ದಾರೆ.

error: Content is protected !!