ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಂದೂರಿನ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿಯೇ ಸಾವಿಗೆ ಕಾರಣವಾಯ್ತಾ..?

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಕಳೆದ ರವಿವಾರ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಅಂತಾ ಕುಟುಂಬದ ಮೂಲಗಳು ತಿಳಿಸಿವೆ.

ಪವನ್ ಕಬನೂರ್(ಸುತಗಟ್ಟಿ)(23) ಎಂಬುವವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈತ ಕಳೆದ ರವಿವಾರ ಮನೆಯಲ್ಲೇ ಕಳೆನಾಶಕ ಸೇವಿಸಿದ್ದ. ಹೀಗಾಗಿ, ತಕ್ಷಣವೇ ಈತನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.

ಪ್ರೀತಿಗೆ ಬಲಿಯಾಯ್ತಾ ಜೀವ..?
ಅಂದಹಾಗೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದ್ರೂ, ಯುವತಿಯೋರ್ವಳ ಪ್ರೀತಿಯಲ್ಲಿ ಬಿದ್ದಿದ್ದ ಮೃತನಿಗೆ ಯುವತಿಯ ತಾಯಿ ಬುದ್ದಿವಾದ ಹೇಳಿದ್ದಳು ಎನ್ನಲಾಗಿದೆ. ಈ ಕಾರಣಕ್ಕಾಗೇ ಯುವಕ ಆತ್ಮಹತ್ಯೆ ಮಾಡಿಕೊಂಡನಾ..? ಗೊತ್ತಿಲ್ಲ, ಇನ್ನಷ್ಟೇ ತಿಳಿದು ಬರಬೇಕಿದೆ.

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!