ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಕಾಲೇಜು ಬಳಿ KSRTC ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ನಾಪತ್ತೆಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಓರ್ವ ವ್ಯಕ್ತಿಗೆ ತೀವ್ರ ಗಾಯವಾಗಿದೆ. ಗುರುವಾರ ನಡುರಾತ್ರಿಯಲ್ಲಿ ಘಟನೆ ನಡೆದಿದ್ದು ಮಂಗಳೂರಿಗೆ ಹೊರಟಿದ್ದ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ‌.

ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಭೀಮಪ್ಪ ಮುತ್ತಪ್ಪ ಗಡಾದಿ(34) ತೀವ್ರ ಗಾಯಗೊಂಡಿದ್ದಾನೆ.

 

ಅಂಬ್ಯುಲೆನ್ಸ್ ಸಿಬ್ಬಂದಿಗೆ ತರಾಟೆ..!
ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆ ಅಗತ್ಯಬಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲು ವೈದ್ಯರು ಸೂಚಿಸಿದ್ದರು. ಹೀಗಾಗಿ, ತಾಲೂಸ್ಪತ್ರೆಯ “ನಗು ಮಗು” ಅಂಬ್ಯುಲೆನ್ಸ್ ಗೆ ಸಂಪರ್ಕಿಸಿದಾಗ ಅಂಬ್ಯುಲೆನ್ಸ್ ಸಿಬ್ಬಂದಿಗಳು ಗಾಯಾಳುವನ್ನು ಸಾಗಿಸಲು ನಕರಾ ಮಾಡಿದ್ದಾರೆ. ಹೀಗಾಗಿ, ಸಾರ್ವಜನಿಕರು ಅಂಬ್ಯುಲೆನ್ಸ್ ಸಿಬ್ಬಂದಿಗಳೊಗೆ ಹಿಗ್ಗಾಮುಗ್ಗಾ ತರಾಟೆಗೆ ಪಡೆದಿದ್ದಾರೆ. ನಂತರ ಸಾರ್ವಜನಿಕರೇ ಅಂಬ್ಯುಲೆನ್ಸ್ ನಲ್ಲಿ ಗಾಯಾಳುವನ್ನು ಕೂರಿಸಿದ್ದಾರೆ.

ಇನ್ನು ಮುಂಡಗೋಡ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!