ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರೋ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಇನ್ನು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾನೆ.

ಪಾಳಾ ಹಾಗೂ ಸಿಂಗನಳ್ಳಿ ನಡುವಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!