ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ.
ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ.
ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ ಈಗಾಗಲೇ ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಅಡ್ಡಮತದಾನ ಮಾಡಿದ್ದು, ಈಗಾಗಲೇ ಕಾಂಗ್ರೆಸ್ ಪಡಸಾಲೆಯಲ್ಲಿ ಕಾಲಿಟ್ಟಂತೆ ಆಗಿದೆ. ಅದೇ ರೀತಿ ಸಂಜೆಯಷ್ಟೊತ್ತಿಗೆ ಶಾಸಕ ಶಿವರಾಮ್ ಹೆಬ್ಬಾರ್ ರವರೂ ಕೂಡ ಅಡ್ಡ ಮತದಾನ ಮಾಡುವ ಎಲ್ಲಾ ಸಾಧ್ಯತೆಗಳೂ ಇದ್ದು, ಸಂಜೆಯ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಅಂದಹಾಗೆ, ಸದ್ಯ ರಾಜ್ಯಸಭಾ ಚುನಾವಣೆಗಾಗಿ ಕಾದು ಕುಳಿತಿದ್ದ ಶಿವರಾಮ್ ಹೆಬ್ಬಾರ್, ಚುನಾವಣೆ ಬಳಿಕ ಕಾಂಗ್ರೆಸ್ ಸೇರುವ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಇವತ್ತು ಮತದಾನದ ಬಳಿಕ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎನ್ನಲಾಗ್ತಿದೆ.
ಲೋಕಸಭೆಗೆ ಸ್ಪರ್ಧಿಸ್ತಾರಾ ಹೆಬ್ಬಾರ್..?
ಅಸಲು, ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗ್ತಿರೋ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ ಸೋಮಶೇಖರ್ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗ್ತಾರೆ ಅನ್ನೋ ಮಾತುಗಳು ಕೇಳಿ ಬರ್ತಿವೆ. ಆದ್ರೆ, ಇದೇಲ್ಲದಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.