ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಭೀಕರ ರಸ್ತೆ ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ‌ ಮುಂಬಾಗ ಸಂಪೂರ್ಣ ಜಖಂ ಆಗಿದೆ.

ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ.

ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!