ಹಾವೇರಿ ಜಿಲ್ಲೆಯ ಹಿರೆಕೆರೂರಿನ ಹಂಸಬಾವಿ ಹೋರಿ ಬೆದರಿಸುವ ಹಬ್ಬದಲ್ಲಿ ದುರಂತ ಸಂಭವಿಸಿದೆ. ಹೋರಿ ತಿವಿದು ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಘಟನೆ ನಡೆದಿದೆ. ಅರಳೀಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ(38), ಮೃತ ಯುವಕನಾಗಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಅಲ್ದೆ, 16 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೀಗಾಗಿ, ಹೋರಿ ಬೆದರಿಸುವ ಹಬ್ಬವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವಾಗಿದೆ.

error: Content is protected !!