ಶಿರಸಿ: ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ
ಮಾತನಾಡಿದರು. ಖಾಸಗಿ ಸಂಸ್ಥೆಗಳು ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

error: Content is protected !!