ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ.
ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.