ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ. ಅಂಜಲಿ, ನಾಮಪತ್ರವನ್ನು ಸಿದ್ದಿವಿನಾಯಕನ ಮುಂದೆ ಇಟ್ಟು ಸಂಕಲ್ಪ ಮಾಡಿಕೊಂಡು ಪೂಜೆ ಸಲ್ಲಿಸಿದ್ರು.
ಇನ್ನು ಮತ್ತೊಮ್ಮೆ ಕಾರವಾರದ ಮಾಲಾದೇವಿ ಮೈದಾನದಿಂದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಸಲ್ಲಿಸಲಿದ್ದಾರೆ.