ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಹುತೇಕ ಕರಡಿ ಸಂಗಣ್ಣ ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ನಿನ್ನೆ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಚರ್ಚಿಸಿದ್ದರು. ಅದ್ರಂತೆ ಇಂದು ಕರಡಿ ಸಂಗಣ್ಣ ನಿವಾಸಕ್ಕೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಕೂಡ ಭೇಟಿ ನೀಡಿದ್ದರು.
ಹೀಗಾಗಿ, ಕಾಂಗ್ರೆಸ್ ಸೇರ್ಪಡೆ ಸಲುವಾಗಿನೇ ಕರಡಿ ಸಂಗಣ್ಣರವರು ಬೆಂಗಳೂರಿಗೆ ತೆರಳಿದ್ದಾರೆ ಅನ್ನೊಇ ಮಾಹಿತಿ ಲಭ್ಯವಾಗಿದೆ.