ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!

ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.

 

ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವಿಠ್ಠಲ ಬಾಳಂಬಿಡ ಹಾಗೂ ಭರತ್ ರಾಜ್ ಹದಳಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೆದಾರಿ ಮುಗಳಿ ಹಾಗೂ ಮಂಜುನಾಥ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!