ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ.
ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.