ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು.
ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು.
ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರ ಪರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರಚಾರ ನಡೆಸಲಿದ್ದಾರೆ. ಚುನಾವಣೆ ಉಸ್ತುವಾರಿ ಸಚಿವ ಕೆ. ಎ. ಜಾರ್ಜ್, ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಾವೇ ಗೆಲ್ತಿವಿ..!
ಈ ಸಮಾರಂಭದಲ್ಲಿ ಇಪ್ಪತೈದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಓಡಾಡಿದ್ದೇನೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ. ಕೇಂದ್ರದಲ್ಲಿಯೂ ಸಹ ಇಂಡಿಯಾ ಮೈತ್ರಿ ಗೆಲವು ಸಾಧಿಸುತ್ತದೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿ ಐದು ಪಂಚ ಯೋಜನೆಯನ್ನು ತರುತ್ತಿದ್ದೇವೆ. ದೇಶದಲ್ಲಿ ನಮ್ಮ ಸರಕಾರ ಬಂದ ಮೇಲೆ ಪಂಚ ಯೋಜನೆಗಳನ್ನು ಅನುಷ್ಠಾನ ಮಾಡುತ್ತೇವೆ. ಇದರಿಂದ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ರಾಜ್ಯದ ಐದು ಯೋಜನೆಗಳು ಮಹಿಳೆಯರ ಪರ ಇವೆ. ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ನಮ್ಮ ಪರ ಇರುತ್ತಾರೆ. ರಾಜ್ಯದಲ್ಲಿ 19 ರಿಂದ 20 ಕ್ಷೇತ್ರವನ್ನು ಗೆಲುತ್ತೇವೆ.
ಈ ವೇಳೆ ಮಾಜಿ ಶಾಸಕ ವಿಎಸ್ ಪಾಟೀಲ, ಕಾಂಗ್ರೆಸ್ ಮುಖಂಡ ಶ್ರೀನಿವಾಸ ಧಾತ್ರಿ, ಕೃಷ್ಣ ಹಿರೇಹಳ್ಳಿ, ಎಚ್. ಎಂ ನಾಯ್ಕ ಸೇರಿದಂತೆ ಮುಂತಾದವರಿದ್ದರು.
ಹೆಲಿಕಾಪ್ಟರ್ ನಲ್ಲಿ ಬರ್ತಿದಾರೆ ಸಿಎಂ..!
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವರುಗಳು ಆಗಮಿಸಲಿದ್ದು ಕರಗಿನಕೊಪ್ಪ ಲೋಯೋಲಾ ಕ್ರೀಡಾಂಗಣಕ್ಕೆ ಹೆಲಿಕಾಪ್ಟರನಲ್ಲಿ ಆಗಮಿಸಲಿದ್ದಾರೆ. ಅಲ್ಲಿಂದ ವಾಹನದ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿ,ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖ್ಯಮಂತ್ರಿ ಬರುವ ಹಿನ್ನಲ್ಲೆಯಲ್ಲಿ ಪಟ್ಟಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು ಜಿಲ್ಲಾವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚವರಿ ಎಸ್ ಪಿ ಬದರಿನಾಥ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಯನ್ನು ಪರಿಶೀಲಿಸಿದರು.