ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ.

ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!