ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇ‌ಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!

ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾ‌ನೆ. ಇನ್ನು ಘಟನೆಯಲ್ಲಿ
ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ.

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!