ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ.

ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ.

ಬರೋಬ್ಬರಿ 2kg ಗಾಂಜಾ..!
ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್ ಹಸನ್ ಶೇಖ್, ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು
ಅರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg ತೂಕದ ಗಾಂಜಾ ವಶಪಡಿಸಿ ಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಏನಿಲ್ಲವೆಂದ್ರೂ 90 ಸಾವಿರ ರೂಪಾಯಿ.

ಸಿಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ, ಪಿಎಸ್ಐ ಪರಶುರಾಮ್, ಕ್ರೈಂ ಪಿಎಸ್ ಐ ಹನ್ಮಂತಪ್ಪ ವಡಗುಂಟಿ, ಸಿಬ್ಬಂದಿಗಳಾದ ಮಂಜು ಚಿಂಚಲಿ, ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ್ ಮುಧೋಳ್, ಬಸವರಾಜ್ ಒಡೆಯರ್ ದಾಳಿಯಲ್ಲಿ ಭಾಗಿಯಾಗಿದ್ರು.

error: Content is protected !!