ಪಾಳಾ ಬಳಿ ಬೈಕ್ ಸವಾರನ ಮೇಲೆ ಉರುಳಿ ಬಿದ್ದ ಮರ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ ರಸ್ತೆ ಮೇಲೆ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮರ ಉರುಳಿಬಿದ್ದು ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ‌ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ.

ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಗಾಯಾಳುವನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುಂಡಗೋಡ ಪಿಎಸ್ ಐ ಪರಶುರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

error: Content is protected !!