ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ.

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ.

ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ 108ರ ವಾಹನದ ಸ್ಟಾಪ್ ನರ್ಸ ಶಂಕರ್ ಲಮಾಣಿ, ಚಾಲಕರು ಟಿಟಿ ವಾಹನದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿ ಅವರಿಗೆ ಚಿಕಿತ್ಸೆ ‌‌ನೀಡಿ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಿದ್ದಾರೆ.

ಈ ಮೂವರು ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಚಿಕಿತ್ಸೆಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗಂಗಾಮದವರನ್ನು ತಿಳಿದು ಬಂದಿದೆ ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡ ನಂತರ ಎಲ್ಲಮ್ಮನಗುಡ್ಡಕ್ಕೆ ತೆರಳಿ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠ ಅಂಶುಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ‌ನೀಡಿದ್ದಾರೆ.

error: Content is protected !!