ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!

ಮುಂಡಗೋಡ ತಾಲೂಕಿನ ನ್ಯಾಸರ್ಗಿಯ ಗೌಳಿದಡ್ಡಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತನು ಶಿಗ್ಗಾವಿ ತಾಲೂಕಿನ ಹೊಸುರು ಗ್ರಾಮದವನು ಅಂತಾ ತಿಳಿದು ಬಂದಿದೆ.

ಹೊಸೂರಿನ ವೀರಭದ್ರಪ್ಪ ಶೇಖರಯ್ಯ ಹಿರೇಮಠ(48), ಎಂಬುವವರೇ ಮೃತಪಟ್ಟ ಬೈಕ್‌ ಸವಾರನಾಗಿದ್ದಾನೆ. ಈತ ಮುಂಡಗೋಡಿನಿಂದ ನ್ಯಾಸರ್ಗಿ ಮಾರ್ಗವಾಗಿ ಹೊಸೂರಿಗೆ ಬೈಕ್ ಮೂಲಕ ಹೊರಟಿದ್ದ. ಈ ವೇಳೆ ನ್ಯಾಸರ್ಗಿ ಸಮೀಪದ ಗೌಳಿದಡ್ಡಿಯ ರಸ್ತೆ ತಿರುವಿನಲ್ಲಿ ಅಪಘಾತವಾಗಿದೆ ಅನ್ನೊ ಮಾಹಿತಿ ತಿಳಿದುಬಂದಿದೆ.

ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.

error: Content is protected !!