ಕಾರವಾರ: ಉತ್ತರ ಕನ್ನಡದ ಎಸ್ಪಿ ಡಾ.ವಿಷ್ಣುವರ್ಧನ್ ವರ್ಗವಾಗಿದ್ದಾರೆ. ನೂತನ ಎಸ್ಪಿಯಾಗಿ ನಾರಾಯಣ್ ಎಂ. ಅವರನ್ನು ಸರ್ಕಾರ ನೇಮಕ ಮಾಡಿದೆ.
ಅಂದಹಾಗೆ, ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಲ್ಲಿ, ಉತ್ತರಕನ್ನಡ ಎಸ್ಪಿ ಆಗಿದ್ದ ಡಾ. ವಿಷ್ಣುವರ್ಧನ್ ಅವರನ್ನ ಸಹ ವರ್ಗಾವಣೆ ಮಾಡಲಾಗಿದೆ.
ಉತ್ತರಕನ್ನಡ ಹಾಲಿ ಎಸ್ಪಿ ಆಗಿದ್ದ ವಿಷ್ಣುವರ್ಧನ್ ಅವರನ್ನ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನಾರಾಯಣ್ ಎಂ ಅವರನ್ನ ನೇಮಕ ಮಾಡಲಾಗಿದೆ. ಇನ್ನು, ನಾರಾಯಣ್ ಎಂ. ರವರು 2012ರಲ್ಲಿ ಭಟ್ಕಳ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಉತ್ತರಕನ್ನಡ ಎಸ್ಪಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.