ಉತ್ತರ ಕನ್ನಡದಲ್ಲಿ ಮಳೆಯ ಅರ್ಭಟ ಜೋರಾಗಿದೆ. ಪರಿಣಾಮ, ಹೊನ್ನಾವರ ತಾಲೂಕಿನ ಗುಂಡಬಾಳ ನದಿಯ ನೆರೆ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಅಧಿಕಗೊಳ್ಳುತ್ತಿದೆ. ಹೀಗಾಗಿ, ಹೊನ್ನಾವರ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಹೊರಡಿಸಿದ್ದಾರೆ.
ಹೊನ್ನಾವರ ತಾಲೂಕಿನ ಜನತಾ ವಿದ್ಯಾಲಯ ಅನಿಲಗೋಡ್, ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ, ಗುಂಡ ಬಾಳ ನಂ-2, ಗುಂಡಿ ಬೈಲ್ ನಂ 2, ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ ವಲ್ಕಿ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..!
ಗುಂಡ ಬಾಳ ನದಿಗೆ ಪ್ರವಾಹ ಹಿನ್ನಲೆಯಲ್ಲಿ, ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಹರಿಜನಕೇರಿ ಮತ್ತು ಹಿತ್ತಲಕೇರಿ ಮಜೇರಿಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಈ ಭಾಗದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾಳಜಿ ಕೇಂದ್ರ ತೆರೆಯಲಾಗಿದೆ ಅಂತಾ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ.
ವಾಸ್ತವ್ಯ ಇರುವ ಜನರನ್ನು, ಜಿಲ್ಲಾಡಳಿತದ ವತಿಯಿಂದ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಕರೆತಂದು ಅಗತ್ಯ ವ್ಯವಸ್ಥೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.