ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಮಳೆಯ ಅಬ್ಬರ ಕೊಂಚ ತಣ್ಣಗಾಗಿದ್ದರೂ, ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮೇಲೆಯೇ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಅಸ್ಯವ್ಯಸ್ತವಾಗಿದೆ.
ಹೊನ್ನಾವರ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕರ್ನಲ್ ಹಿಲ್ ಗುಡ್ಡ ಕುಸಿದಿದ್ದು ರಸ್ತೆಯ ಮೇಲೆ ಮಣ್ಣು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಒಂದು ಕಡೆಯಿಂದ ಮಾತ್ರ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಐಆರ್‌ಬಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನೊಂದು ಗಂಟೆಯಲ್ಲಿ ರಸ್ತೆ ಸಂಚಾರ ಸುಗಮವಾಗಲಿದೆ ಅಂತಾ ಮಾಹಿತಿ ತಿಳಿದು ಬಂದಿದೆ.