ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಜಿಲ್ಲಾಧಿಕಾರಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಅವಾಂತರಗಳು ಚಾಲ್ತಿಯಲ್ಲಿವೆ. ಅದ್ರಲ್ಲೂ, ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ, ಕರಾವಳಿ ಭಾಗದ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಿರಂತರ ಮಳೆಯ ಕಾರಣಕ್ಕಾಗಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

 

error: Content is protected !!