ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಅವಾಂತರಗಳು ಚಾಲ್ತಿಯಲ್ಲಿವೆ. ಅದ್ರಲ್ಲೂ, ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ, ಕರಾವಳಿ ಭಾಗದ ಎರಡು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರ ಮಳೆಯ ಕಾರಣಕ್ಕಾಗಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಹೊನ್ನಾವರ, ಕುಮಟಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ರಂದು ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..