ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಸಾವಾಗಿದೆ. 8 ಮನೆಗಳು ಸಂಪೂರ್ಣ ಹಾನಿಯಾಗಿವೆ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ ಹಾನಿ ಹಾಗೂ 2 ಜಾನುವಾರು ಸಾವು ಸಂಭವಿಸಿದೆ. 830 ಮನೆಗಳು ನೀರಿನಿಂದ ಜಲಾವೃತ್ತವಾಗಿದ್ದು, 809 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ವೈದ್ಯಕೀಯ ನೆರವು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
ಇನ್ನು, ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.