ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

error: Content is protected !!