ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೊಷಣೆ ಮಾಡಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

error: Content is protected !!