ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಮೇಡಮ್ಮು ಆದೇಶಿಸಿದ್ದಾರೆ.
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..